ADVERTISEMENT

ಭಯೋತ್ಪಾದನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮ್ಮು ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ಐಎಎನ್ಎಸ್
Published 24 ಡಿಸೆಂಬರ್ 2022, 6:09 IST
Last Updated 24 ಡಿಸೆಂಬರ್ 2022, 6:09 IST
   

ಶ್ರೀನಗರ: ಹಲವು ಉಗ್ರಗಾಮಿ ಸಂಘಟನೆಗಳ ಭಯೋತ್ಪಾದನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ.

ದಾಳಿ ವೇಳೆ ನಡೆಯಬಹುದಾದ ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಅರೆಸೈನಿಕ ಪಡೆಗಳು ಎನ್ಐಎಗೆ ನೆರವು, ಭದ್ರತೆ ಒದಗಿಸಿವೆ.

‘ಉಗ್ರ ಸಂಘಟನೆಗಳ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವ ಜನರು ಇಲ್ಲಿದ್ದಾರೆ. ನಮ್ಮ ಕಾರ್ಯಾಚರಣೆ ಅವರ ವಿರುದ್ಧ ನಡೆಯುತ್ತಿದೆ’ ಎಂದು ಎನ್‌ಐಎ ಮೂಲವೊಂದು ತಿಳಿಸಿದೆ. ಈ ವರೆಗಿನ ದಾಳಿಯಲ್ಲಿ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.