
ಪ್ರಜಾವಾಣಿ ವಾರ್ತೆ
ನವದೆಹಲಿ (ಪಿಟಿಐ): ತ್ವರಿತ ವಿಚಾರಣೆಯನ್ನು ಖಾತರಿಪಡಿಸಲು ದೇಶದ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಮೀಸಲಾದ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿ 10ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿರುವ ಕಡೆಗಳಲ್ಲಿ ಒಂದಕ್ಕಿಂತ ಹೆಚ್ಚು ಕೋರ್ಟ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಸಂಘಟಿತ ಅಪರಾಧ ಮತ್ತು ಭಯೋತ್ಪಾದನೆ ನಿಗ್ರಹ ಕಾಯ್ದೆಯಡಿ ದಾಖಲಾದ ಪ್ರಕರಣಗಳ ತ್ವರಿತ ವಿಚಾರಣೆಗೆ ದೆಹಲಿಯಲ್ಲಿ 16 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ದೆಹಲಿ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರ ಪೀಠಕ್ಕೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.