ಎನ್‌ಐಎ
ಪಿಟಿಐ ಚಿತ್ರ
ಶ್ರೀನಗರ: ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ 'ಎನ್‌ಐಎ' ಸಂಸ್ಥೆ ದೇಶದಾದ್ಯಂತ 22 ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ಆರಂಭಿಸಿದೆ.
ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ 9 ಕಡೆ, ಬಿಹಾರದ 8 ಸ್ಥಳಗಳು, ಉತ್ತರ ಪ್ರದೇಶದ 2, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನ ತಲಾ ಒಂದು ಕಡೆ ಶೋಧ ನಡೆಯುತ್ತಿದೆ ಎಂದು ಉಲ್ಲೇಖಿಸಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಹತ್ಯೆಯಾಗಿದ್ದಾನೆ.
ಗುಡ್ಡರ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.