ನವದೆಹಲಿ: ಭಯೋತ್ಪಾದನೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ರಾಜ್ಯಗಳ 22 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ಮಾಡಿ, ಶೋಧ ನಡೆಸಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರದ 8, ಜಮ್ಮು ಮತ್ತು ಕಾಶ್ಮೀರದ 9, ಉತ್ತರ ಪ್ರದೇಶದ 2, ಕರ್ನಾಟಕ, ತಮಿಳುನಾಡು ಹಾಗೂ ಮಹಾರಾಷ್ಟ್ರದ ತಲಾ ಒಂದು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ’ ಎಂದು ಅಧಿಕಾರಿಯು ತಿಳಿಸಿದ್ದಾರೆ.
ಬಾರಾಮುಲ್ಲಾ, ಕುಲಗಾಮ್, ಅನಂತನಾಗ್, ಪುಲ್ವಾಮಾ ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.