ADVERTISEMENT

ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಎನ್‌ಐಎ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜೂನ್ 2022, 6:45 IST
Last Updated 29 ಜೂನ್ 2022, 6:45 IST
   

ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಶಿರಚ್ಛೇದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಿಚಾರಣೆ ನಡೆಸಲಿದೆ.

ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ಎನ್‌ಐಎಗೆ ನಿರ್ದೇಶನ ನೀಡಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆ ಮತ್ತು ಅಂತರರಾಷ್ಟ್ರೀಯ ಸಂಬಂಧದ ಕುರಿತಂತೆ ಎನ್‌ಐಎ ಸಮಗ್ರ ತನಿಖೆ ನಡೆಸಲಿದೆ ಎಂದು ಗೃಹ ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದೆ.


ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದರು.

ADVERTISEMENT

ಈ ಘಟನೆ ಖಂಡಿಸಿ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆಗಳು ಆರಂಭವಾಗಿವೆ.

ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಇವನ್ನೂ ಓದಿ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.