ADVERTISEMENT

ಕೋವಿಡ್‌: ಏಪ್ರಿಲ್ 30ರವರೆಗೆ ದೆಹಲಿಯಲ್ಲಿ ರಾತ್ರಿ ಕರ್ಫ್ಯೂ ಜಾರಿ

ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಕರ್ಫ್ಯೂ

ಪಿಟಿಐ
Published 6 ಏಪ್ರಿಲ್ 2021, 8:14 IST
Last Updated 6 ಏಪ್ರಿಲ್ 2021, 8:14 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ‘ಕೋವಿಡ್ 19‘ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರದಿಂದ ರಾತ್ರಿ ಕರ್ಫ್ಯೂವನ್ನು ಸರ್ಕಾರ ಜಾರಿಗೊಳಿಸಿದೆ.

‘ದೆಹಲಿಯಲ್ಲಿ ಕೆಲವು ವಾರಗಳಿಂದ ಕೊರೊನಾ ಸೋಂಕಿನ ಪ್ರಮಾಣ ಶೇ 5.54ರಷ್ಟು ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 30ರವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಕರ್ಫ್ಯೂ ವಿಧಿಸಲಾಗಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಸೋಮವಾರದವರೆಗಿನ ಮಾಹಿತಿ ಪ್ರಕಾರ 3,548 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 15 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 11,096ಕ್ಕೆ ಏರಿದೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.