ಬಾಂಗ್ಲಾದೇಶ ಧ್ವಜ
– ಪಿಟಿಐ ಚಿತ್ರ
ನವದೆಹಲಿ: ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ಗಡೀಪಾರು ಮಾಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಜಾಮಾ ಮಸೀದಿ ಮತ್ತು ನಬಿ ಕರೀಮ್ ಪ್ರದೇಶಗಳಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಅಕ್ರಮವಾಗಿ ವಾಸಿಸುತ್ತಿದ್ದವರನ್ನು ಪತ್ತೆಹಚ್ಚಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಜನವರಿ ಮೊದಲ ವಾರದಲ್ಲಿ ಒಟ್ಟು 14 ಮಂದಿ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲಾಗಿದೆ. 2024ರಲ್ಲಿ ಐವರನ್ನು ಗಡೀಪಾರು ಮಾಡಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಮುಂದೆ ಹಾಜರುಪಡಿಸಲಾಯಿತು. ಎಫ್‌ಆರ್‌ಆರ್‌ಒ ಗಡೀಪಾರು ಆದೇಶ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.