ಬಂಧನ ( ಸಾಂಕೇತಿಕ ಚಿತ್ರ)
ಪೆನುಕೊಂಡ: ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯಲ್ಲಿರುವ ಕಿಯಾ ಮೋಟಾರ್ಸ್ ಘಟಕದಲ್ಲಿ 900 ಎಂಜಿನ್‌ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು ಸಂಸ್ಥೆಯ ಆಂತರಿಕ ಲೆಕ್ಕ ಪರಿಶೋಧನೆಯ ವೇಳೆ, ಎಂಜಿನ್‌ಗಳು ಕಾಣೆಯಾಗಿರುವುದು ತಿಳಿದು ಬಂತು. ಮಾರ್ಚ್ 19ರಂದು ಕಿಯಾ ಮೋಟಾರ್ಸ್ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ಕುರಿತು ತನಿಖೆ ನಡೆಸಿದ ಆಂಧ್ರಪ್ರದೇಶ ಪೊಲೀಸರು ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಕದ್ದ ಎಂಜಿನ್‌ಗಳನ್ನು ದೇಶದ ಅನೇಕ ರಾಜ್ಯಗಳಿಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದ ಗಡಿಯಲ್ಲಿ ಎಂಜಿನ್ ಕಳ್ಳಸಾಗಣೆಯ ಅಕ್ರಮ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.