ADVERTISEMENT

ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್: 9 ಜನ ಸಾವು, 23 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 6:17 IST
Last Updated 5 ಡಿಸೆಂಬರ್ 2019, 6:17 IST
ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್
ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್   

ರಿವಾ, ಮಧ್ಯಪ್ರದೇಶ: ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಜನರು ಮೃತಪಟ್ಟು, 23 ಜನ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಿವಾ ಜಿಲ್ಲೆಯಲ್ಲಿ ನಡೆದಿದೆ.

ರಿವಾದ ಗುಧ್ ರಸ್ತೆಯಲ್ಲಿ ಸಿಧಿ ಮೂಲದ ಖಾಸಗಿ ಬಸ್ ಮುಂಜಾನೆ 6 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಅಬಿದ್ ಖಾನ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಪೊಲೀಸರು ಸ್ಥಳದಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಾಥಮಿಕ ಮಾಹಿತಿ ಪ್ರಕಾರ, ವೇಗವಾಗಿ ಚಲಿಸುತ್ತಿದ್ದ ಬಸ್ದಟ್ಟವಾಗಿ ಮಂಜು ಕವಿದಿದ್ದರಿಂದಾಗಿ ರಸ್ತೆ ಕಾಣದೆ ಹೆದ್ದಾರಿ ಬಳಿಯಲ್ಲಿ ನಿಂತಿದ್ದಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್ ಮಾತನಾಡಿ, ಮೃತರ ಕುಟುಂಬದವರಿಗೆ ನನ್ನ ಸಂತಾಪಗಳು. ಗಾಯಾಳುಗಳ ಸಂಪೂರ್ಣ ಚಿಕಿತ್ಸೆ ಮತ್ತು ಕುಟುಂಬಗಳಿಗೆ ಅಗತ್ಯ ಸಹಾಯವನ್ನು ಒದಗಿಸುವಂತೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.