ತಿರುವನಂತಪುರ: ನಿಫಾ ವೈರಾಣು ದಾಳಿಗೆ ತುತ್ತಾಗಿದ್ದ 57 ವರ್ಷದ ವ್ಯಕ್ತಿಯೊಬ್ಬರು ಪಾಲಕ್ಕಾಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.
ನಿಫಾ ದಾಳಿಗೆ ತುತ್ತಾಗಿದ್ದ ಎರಡು ಪ್ರಕರಣಗಳು ರಾಜ್ಯದಲ್ಲಿ ಇತ್ತೀಚಿಗೆ ವರದಿಯಾಗಿತ್ತು. ಪಾಲಕ್ಕಾಡ್‌ನ 38 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. 18 ವರ್ಷದ ವಿದ್ಯಾರ್ಥಿನಿ ಕೋಯಿಕ್ಕೋಡ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದರು.
ಇದರ ಬೆನ್ನಲ್ಲೇ, ‘ಪಾಲಕ್ಕಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಅನಗತ್ಯವಾಗಿ ಆಸ್ಪತ್ರೆಗಳಿಗೆ ಭೇಟಿ ನೀಡಬಾರದು’ ಎಂದು ಕೇರಳ ಆರೋಗ್ಯ ಸಚಿವ ವೀಣಾ ಜಾರ್ಜ್ ಸಲಹೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.