ADVERTISEMENT

Kerala Nipah Alert: ಸಂಜೆಯೊಳಗೆ ಶಂಕಿತರ ಪರೀಕ್ಷೆ ವರದಿ; ಕೇರಳದ ಆರೋಗ್ಯ ಸಚಿವೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2023, 6:23 IST
Last Updated 12 ಸೆಪ್ಟೆಂಬರ್ 2023, 6:23 IST
<div class="paragraphs"><p>ವೀಣಾ ಜಾರ್ಜ್</p></div>

ವೀಣಾ ಜಾರ್ಜ್

   

(ಚಿತ್ರ ಕೃಪೆ: X/@VeenaGeorge03)

ತಿರುವನಂತಪುರಂ: ಕೇರಳ ಮತ್ತೆ ನಿಫಾ ಸೋಂಕಿನ ಭೀತಿಯಲ್ಲಿದೆ. ಇಂದು ಸಂಜೆಯೊಳಗೆ ಶಂಕಿತರ ಪರೀಕ್ಷೆ ವರದಿ ಸಿಗಲಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ADVERTISEMENT

ಇಬ್ಬರು ಮೃತಪಟ್ಟವರ ಮತ್ತು ಶಂಕಿತ ಸೋಂಕಿನ ಮೂವರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ರವಾನಿಸಲಾಗಿದೆ.

ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕಿಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ.

ನಿಫಾ ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಆರೋಗ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಆರೋಗ್ಯ ಸಚಿವ ವೀಣಾ ಜಾರ್ಜ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.

2018ರಲ್ಲಿ ನಿಫಾ ವೈರಸ್‌ಗೆ ತುತ್ತಾಗಿದ್ದ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 17 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.