
ನವದೆಹಲಿ: ಪಶ್ಚಿಮ ಬಂಗಾಳದ ಕಲ್ಯಾಣಿಯಲ್ಲಿರುವ ಏಮ್ಸ್ ಐಸಿಎಂಆರ್‌ನ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯದಲ್ಲಿ ನಿಫಾ ವೈರಸ್‌ನ ಎರಡು ಶಂಕಿತ ಪ್ರಕರಣಗಳು ಪತ್ತೆಯಾಗಿವೆ.
ಸೋಂಕು ತೀವ್ರ ಸ್ವರೂಪದ್ದಾಗಿದ್ದು, ಮಾರಣಾಂತಿಕ ಹಾಗೂ ಕ್ಷಿಪ್ರಗತಿಯಲ್ಲಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಶಂಕಿತ ರೋಗಿಯು ಭಾರತ–ಬಾಂಗ್ಲಾದೇಶ ಗಡಿ ಸಮೀಪದ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಘುಗ್ರಗಾಚಿಗೆ ಪ್ರಯಾಣಿಸಿದ ಇತಿಹಾಸವಿದೆ ಎನ್ನಲಾಗಿದೆ.
ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ, ಕೇಂದ್ರ ಆರೋಗ್ಯ ಕಾರ್ಯದರ್ಶಿಯು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ (ಆರೋಗ್ಯ) ಜೊತೆ ಚರ್ಚಿಸಿ, ಕೇಂದ್ರದ ತಂಡವೊಂದನ್ನು ನಿಯೋಜಿಸಿದ್ದಾರೆ ಎಂಬುದು ಗೊತ್ತಾಗಿದೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಮುಖ್ಯಮಂತ್ರಿ ಮಮತಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿ ನಿಭಾಯಿಸಲು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.