ADVERTISEMENT

ಹೊಸ ಕಾಯ್ದೆಯಡಿ ನೀರವ್‌, ಚೋಕ್ಸಿ ವಿಚಾರಣೆ

ಪಿಟಿಐ
Published 26 ಜುಲೈ 2018, 19:30 IST
Last Updated 26 ಜುಲೈ 2018, 19:30 IST
ನೀರವ್‌ ಮೋದಿ
ನೀರವ್‌ ಮೋದಿ   

ಮುಂಬೈ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (ಪಿಎನ್‌ಬಿ) ₹13 ಸಾವಿರ ಕೋಟಿ ವಂಚನೆ ಆರೋಪ ಹೊತ್ತಿರುವ ಉದ್ಯಮಿ ನೀರವ್‌ ಮೋದಿ ಮತ್ತು ಅವರ ಚಿಕ್ಕಪ್ಪ ಮೆಹುಲ್‌ ಚೋಕ್ಸಿ ಅವರನ್ನು ಇತ್ತೀಚೆಗೆ ಸಂಸತ್ತಿನ ಅನುಮೋದನೆ ಪಡೆದಿರುವ ‘ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿಗಳ ಕಾಯ್ದೆ’ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಈ ಕಾಯ್ದೆ ಅಡಿ ಅವರಿಗೆ ನ್ಯಾಯಾಲಯ ನೋಟಿಸ್ ನೀಡಿದೆ. ನೀರವ್‌ ಅವರು ಸೆಪ್ಟೆಂಬರ್‌ 25 ಮತ್ತು ಚೋಕ್ಸಿ ಅವರು 26ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಇಬ್ಬರ ವಿರುದ್ಧ ಹೊಸ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ₹3,500 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಬೇಕು ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಈಚೆಗೆ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.

ADVERTISEMENT

ಮಲ್ಯಗೂ ನೋಟಿಸ್‌
ಉದ್ಯಮಿ ವಿಜಯ್‌ ಮಲ್ಯ ವಿರುದ್ಧವೂ ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿಗಳ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳುವಂತೆ ಇ.ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಆ.27ರಂದು ಹಾಜರಾಗುವಂತೆ ಮಲ್ಯಗೆ ಕೋರ್ಟ್‌ ನೋಟಿಸ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.