ADVERTISEMENT

ನಿರ್ಭಯಾ ಪ್ರಕರಣ: ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸುವಂತೆ ಪವನ್ ಗುಪ್ತಾ ಮನವಿ

ಪಿಟಿಐ
Published 28 ಫೆಬ್ರುವರಿ 2020, 11:24 IST
Last Updated 28 ಫೆಬ್ರುವರಿ 2020, 11:24 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಪವನ್ ಗುಪ್ತಾ (25), ಶಿಕ್ಷೆಯನ್ನು ಕಡಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ಪರಿಹಾರಾತ್ಮಕ ಅರ್ಜಿ ಸಲ್ಲಿಸಿದ್ದಾನೆ.

ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಕಡಿತಗೊಳಿಸಬೇಕು ಎಂದು ಪವನ್ ಮನವಿ ಸಲ್ಲಿಸಿದ್ದಾನೆ. ಈ ಅರ್ಜಿ ತಿರಸ್ಕೃತವಾದರೆ, ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಪವನ್‌ಗೆ ಅವಕಾಶವಿದೆ. ಉಳಿದ ನಾಲ್ವರು ಅಪರಾಧಿಗಳ ಈ ಎಲ್ಲಾ ಅರ್ಜಿಗಳೂ ಈಗಾಗಲೇ ತಿರಸ್ಕೃತವಾಗಿವೆ.

ಗುಪ್ತಾ ಸೇರಿದಂತೆ ನಾಲ್ವರು ಅಪರಾಧಿಗಳಿಗೆ ಮಾರ್ಚ್‌ 3ರಂದು ಮರಣದಂಡನೆ ಜಾರಿ ಮಾಡುವಂತೆ ದೆಹಲಿಯ ಪಾಟಿಯಾಲಹೌಸ್ ನ್ಯಾಯಾಲಯ ಇತ್ತೀಚೆಗೆ ವಾರೆಂಟ್ ನೀಡಿತ್ತು. ಇದರ ಬೆನ್ನಲ್ಲೇ, ಪ್ರಕರಣದ ಇನ್ನೊಬ್ಬ ಅಪರಾಧಿ ವಿನಯ್ ಶರ್ಮಾ, ಜೈಲಿನ ಗೋಡೆಗೆ ತಲೆಯನ್ನು ಚಚ್ಚಿಕೊಂಡು ಗಾಯಮಾಡಿಕೊಂಡಿದ್ದ. ಈ ಮಧ್ಯೆ, ಅಪರಾಧಿ ವಿನಯ್‌ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ ಎಂದು ಆತನ ಪರ ವಕೀಲ ಎ.ಪಿ.ಸಿಂಗ್‌ ಹೇಳಿದ್ದರು. ಆದರೆ, ಇದೆಲ್ಲ ನ್ಯಾಯಾಲಯವನ್ನು ಹಾದಿ ತಪ್ಪಿಸುವ ಮೂಲಕ ನ್ಯಾಯಾದಾನ ಪ್ರಕ್ರಿಯೆ ವಿಳಂಬವಾಗುವಂತೆ ಮಾಡುವ ಹುನ್ನಾರ ಎಂದು ಸಂತ್ರಸ್ತೆಯ ತಾಯಿ ಆಶಾದೇವಿ ಬೇಸರ ವ್ಯಕ್ತಪಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.