ADVERTISEMENT

ಕ್ಷಮಾದಾನ ಅರ್ಜಿ ವಜಾ: ಪರಿಶೀಲನೆಗೆ ‘ಸುಪ್ರೀಂ’ ಮೊರೆ

ನಿರ್ಭಯಾ ಅತ್ಯಾಚಾರ ಪ್ರಕರಣ

ಪಿಟಿಐ
Published 25 ಜನವರಿ 2020, 19:41 IST
Last Updated 25 ಜನವರಿ 2020, 19:41 IST
   

ನವದೆಹಲಿ: ‘ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿರುವ ರಾಷ್ಟ್ರಪತಿ ಅವರ ನಿರ್ಧಾರವನ್ನು ನ್ಯಾಯಾಂಗವು ಪರಿಶೀಲನೆಗೆ ಒಳಪಡಿಸಬೇಕು’ ಎಂದುನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಮುಖೇಶ್‌ ಕುಮಾರ್‌ ಸಿಂಗ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಜನವರಿ 17ರಂದು ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿದರು.

‘ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ವಿಧಾನವನ್ನು ನ್ಯಾಯಾಂಗ ಪರಿಶೀಲನೆಗಾಗಿ ವಿಧಿ 32ರ ಅಡಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ’ ಎಂದು ಮುಖೇಶ್ ಪರ ವಕೀಲ ವೃಂದಾ ಗ್ರೋವರ್‌ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಶತೃಘನ್ ಚೌಹಾನ್ ಪ್ರಕರಣದಲ್ಲಿ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವುದಾಗಿ ಅವರು ಹೇಳಿದ್ದಾರೆ.

ADVERTISEMENT

ಸದ್ಯದ ಆದೇಶದ ಪ್ರಕಾರ, ನಿರ್ಭಯಾ ಅತ್ಯಾಚಾರ ಪ್ರಕರಣದ ಎಲ್ಲಾ ನಾಲ್ವರು ಅಪರಾಧಿಗಳನ್ನು ಫೆ.1ರ ಬೆಳಗ್ಗೆ 6 ಗಂಟೆಗೆ ನೇಣಿಗೇರಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.