ADVERTISEMENT

ನಿರ್ಭಯಾ ಪ್ರಕರಣ: ಫೆ.11ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ಪಿಟಿಐ
Published 7 ಫೆಬ್ರುವರಿ 2020, 18:30 IST
Last Updated 7 ಫೆಬ್ರುವರಿ 2020, 18:30 IST
   

ನವದೆಹಲಿ:ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯುಫೆ.11ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ನೀಡಿರುವ ತಡೆ ಪ್ರಶ್ನಿಸಿಕೇಂದ್ರ ಸರ್ಕಾರವು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ಆರ್‌.ಭಾನುಮತಿ, ಅಶೋಕ್‌ ಭೂಷಣ್‌ ಮತ್ತು ಎ.ಎಸ್‌.ಬೋಪಣ್ಣ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು.

‘ತಿಹಾರ್‌’ ಅರ್ಜಿ ವಜಾ: ನಾಲ್ವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಲು ಹೊಸ ದಿನವನ್ನು ಗೊತ್ತುಪಡಿಸುವಂತೆ ತಿಹಾರ್‌ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. ಫೆ.5ರಂದು ತಮ್ಮ ಕಾನೂನು ಪ್ರಕ್ರಿಯೆಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು ಎಂದು ಅಪರಾಧಿಗಳಿಗೆ ಕೋರ್ಟ್ ಸೂಚಿಸಿತ್ತು. ಇದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಧರ್ಮೇಂದ್ರ ರಾಣಾ ಅವರು ಅರ್ಜಿ ವಜಾಗೊಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.