ADVERTISEMENT

ಮರಣದಂಡನೆಗೆ ಮುನ್ನ ಅಂತಿಮ ಇಚ್ಛೆ ವ್ಯಕ್ತಪಡಿಸಿಲ್ಲ ನಿರ್ಭಯಾ ಅತ್ಯಾಚಾರಿಗಳು

ಪಿಟಿಐ
Published 20 ಮಾರ್ಚ್ 2020, 8:43 IST
Last Updated 20 ಮಾರ್ಚ್ 2020, 8:43 IST
ನಿರ್ಭಯಾ ಅಪರಾಧಿಗಳು
ನಿರ್ಭಯಾ ಅಪರಾಧಿಗಳು   

ದೆಹಲಿ:ದೆಹಲಿಯ ತಿಹಾರ್ ಜೈಲಿನಲ್ಲಿ ಶುಕ್ರವಾರ ಬೆಳಗ್ಗೆನಿರ್ಭಯಾ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲಾಗಿದೆ. ಗಲ್ಲಿಗೇರಿಸುವ ಮುನ್ನಅಂತಿಮ ಇಚ್ಛೆಏನು ಎಂದು ಕೇಳಿದರೆ ಇವರಲ್ಲಿ ಯಾರೊಬ್ಬರೂ ತಮ್ಮಬಯಕೆ ವ್ಯಕ್ತಪಡಿಸಿಲ್ಲ.

ಜೈಲಿನಲ್ಲಿರುವಾಗ ಇವರು ದುಡಿದ ಹಣವನ್ನು ಅವರ ಕುಟುಂಬಕ್ಕೆ ನೀಡಲಾಗುವುದು. ಇದರ ಜತೆಗೆ ಅವರ ಬಟ್ಟೆ ಮತ್ತು ಇತರ ವಸ್ತುಗಳನ್ನು ಕುಟುಂಬದವರಿಗೆ ನೀಡಲಾಗುವುದು. ಮುಕೇಶ್ ಸಿಂಗ್ (32), ಪವನ್ ಗುಪ್ತಾ (25, ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31)- ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು 5.30ಕ್ಕೆ ಗಲ್ಲಿಗೇರಿಸಲಾಗಿದೆ.

2012ಡಿಸೆಂಬರ್ 16ರಂದು ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ 23ರ ಹರೆಯದ ಯುವತಿಯ ಮೇಲೆ ಸಾಮೂಹಿಕಅತ್ಯಾಚಾರವೆಸಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಇವರಿಗೆ ಮರಣ ದಂಡನೆ ವಿಧಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಯುವತಿಯು 13 ದಿನಗಳ ನಂತರ ಸಾವಿಗೀಡಾಗಿದ್ದಳು. ಅಪರಾಧಿಗಳಿಗೆ ಗಲ್ಲು ಶಿಕ್ಷೆ ತೀರ್ಪು ಪ್ರಕಟವಾಗಿದ್ದರೂ ಜನವರಿ ತಿಂಗಳಿನಿಂದ ಮೂರು ಬಾರಿ ಗಲ್ಲಿಗೇರಿಸುವ ದಿನಾಂಕ ಬದಲಾಗಿತ್ತು. ಅಪರಾಧಿಗಳು ಕಾನೂನಿನ ಪ್ರಕ್ರಿಯೆಗಳನ್ನು ಪೂರೈಸಲು ತೆಗೆದುಕೊಂಡ ಸಮಯದಿಂದಾಗಿ ದಿನಾಂಕ ಬದಲಾಗುತ್ತಲೇ ಇತ್ತು.

ADVERTISEMENT

ದಕ್ಷಿಣ ಏಷ್ಯಾದಲ್ಲಿಯೇ ಅತೀ ದೊಡ್ಡ ಕಾರಾಗೃಹವಾಗಿರುವ ತಿಹಾರ್ ಜೈಲಿನಲ್ಲಿಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.