ADVERTISEMENT

ಕಟ್ಟಡ ನಿರ್ಮಾಣಕ್ಕೆ ನಿರ್ಭಯಾ ನಿಧಿ ಬಳಕೆಗೆ ಆಕ್ಷೇಪ

ಪಿಟಿಐ
Published 10 ಫೆಬ್ರುವರಿ 2019, 20:15 IST
Last Updated 10 ಫೆಬ್ರುವರಿ 2019, 20:15 IST
ನಿರ್ಭಯಾ ನಿಧಿ
ನಿರ್ಭಯಾ ನಿಧಿ   

ನವದೆಹಲಿ: ನಿರ್ಭಯಾ ನಿಧಿಯ ಹಣವನ್ನು ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಬಳಸಿರುವುದಕ್ಕೆ ಸಂಸದೀಯ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಹಿಳೆಯರ ರಕ್ಷಣೆಗಾಗಿ ಹಂಚಿಕೆ ಮಾಡಿರುವ ಹಣವನ್ನು ಹೀಗೆ ಅನ್ಯ ಉದ್ದೇಶಗಳಿಗೆ ಬಳಸಿದರೆ ಮೂಲ ಆಶಯಕ್ಕೇ ಧಕ್ಕೆ ಉಂಟಾಗುವುದು ಎಂದು ಕಾಂಗ್ರೆಸ್‌ನ ಸಂಸದ ಪಿ.ಚಿದಂಬರಂ ನೇತೃತ್ವದ ಗೃಹ ಖಾತೆ ವ್ಯವಹಾರಗಳ ಮೇಲಿನ ಸಂಸದೀಯ ಸ್ಥಾಯಿ ಸಮಿತಿ ಅಭಿಪ್ರಾಯಪಟ್ಟಿದೆ.

‘ಕಟ್ಟಡ ನಿರ್ಮಾಣ ಕಾರ್ಯಕ್ಕೆ ಬೇರೆಯೇ ಮೂಲಗಳಿಂದ ಹಣಕಾಸು ಒದಗಿಸಬೇಕು. ಅಲ್ಲದೇ, ನಿರ್ಭಯಾ ನಿಧಿಯ ಹಣವನ್ನು ಈ ರೀತಿ ಬೇರೆ ಉದ್ದೇಶಗಳಿಗಾಗಿ ಬಳಸುವುದನ್ನು ತಡೆಯಲು ಗೃಹ ಸಚಿವಾಲಯ ಕ್ರಮ ಕೈಗೊಳ್ಳುವಂತೆ’ ಸಮಿತಿ ಶಿಫಾರಸು ಮಾಡಿದೆ.

ADVERTISEMENT

ಮಹಿಳೆಯರ ರಕ್ಷಣೆಗೆ ಕ್ರಮ ಕೈಗೊಳ್ಳುವ ಸಲುವಾಗಿ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲಿ 2013ರಲ್ಲಿ ನಿರ್ಭಯಾ ನಿಧಿಯನ್ನು ಸ್ಥಾಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.