ನವದೆಹಲಿ:ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್‌ಗೆ ಪರಿಹಾರಾತ್ಮಕ ಅರ್ಜಿ ಸಲ್ಲಿಸಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಯು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಇನ್ನೊಬ್ಬ ಅಪರಾಧಿಮುಖೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನುನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ನ್ಯಾಯಪೀಠವು ಮಂಗಳವಾರ ನಡೆಸಿತ್ತು.ಮುಖೇಶ್ ಕುಮಾರ್‌ಗೆ ತಿಹಾರ್ ಜೈಲಿನಲ್ಲಿ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂದು ಆತನ ಪರ ವಕೀಲರುವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಆದರೆ,‘ಜೈಲಿನಲ್ಲಿ ಅನುಚಿತವಾಗಿ ನಡೆಸಿಕೊಳ್ಳಲಾಗಿದೆ’ ಎಂಬ ಕಾರಣ, ಇಂಥ ಗಂಭೀರ ಅಪರಾಧದಲ್ಲಿ ಕ್ಷಮೆಗೆ ಮಾನದಂಡವಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು. ತೀರ್ಪುಇಂದು ಪ್ರಕಟಗೊಳ್ಳಲಿದೆ.
ಅಪರಾಧಿಗಳನ್ನು ಫೆಬ್ರುವರಿ 1ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಇತ್ತೀಚೆಗೆ ವಾರಂಟ್ ಜಾರಿ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.