ADVERTISEMENT

ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ, ‘ಸುಪ್ರೀಂ’ ತೀರ್ಪು ಇಂದು

ಪಿಟಿಐ
Published 28 ಜನವರಿ 2020, 19:59 IST
Last Updated 28 ಜನವರಿ 2020, 19:59 IST
   

ನವದೆಹಲಿ: ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಯು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ನಿರ್ಭಯಾ ಪ್ರಕರಣದ ಅಪರಾಧಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ತೀರ್ಪನ್ನು ಸುಪ್ರೀಂ ಕೋರ್ಟ್‌ ಬುಧವಾರ ಪ್ರಕಟಿಸಲಿದೆ.

ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ನ್ಯಾಯಪೀಠವು ಅಪರಾಧಿ ಮುಖೇಶ್‌ ಕುಮಾರ್‌ ಸಿಂಗ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿತು. ಕ್ಷಮಾದಾನ ಅರ್ಜಿ ಜ.17ರಂದು ತಿರಸ್ಕೃತಗೊಂಡಿತ್ತು.

ತಿರಸ್ಕರಿಸಲು ಕೇಂದ್ರ ಮನವಿ: ಅಪರಾಧಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತು. ‘ಜೈಲಿನಲ್ಲಿ ಅನುಚಿತವಾಗಿ ನಡೆಸಿಕೊಳ್ಳಲಾಗಿದೆ’ ಎಂಬ ಕಾರಣ, ಇಂಥ ಗಂಭೀರ ಅಪರಾಧದಲ್ಲಿ ಕ್ಷಮೆಗೆ ಮಾನದಂಡವಲ್ಲ’ ಎಂದು ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ ಹೇಳಿದರು.

ADVERTISEMENT

ಈ ಪ್ರಕರಣದಲ್ಲಿ ಅಪರಾಧಿಗಳಾಗಿರುವ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಲು ಫೆ.1ರ ದಿನಾಂಕ ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.