ADVERTISEMENT

ನಿಥಾರಿ ಹತ್ಯೆ ಪ್ರಕರಣ: ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 16:11 IST
Last Updated 30 ಜುಲೈ 2025, 16:11 IST
.
.   

ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ 2006ರಲ್ಲಿ ನಡೆದ ನಿಥಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದ್ದ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿದ್ದ 14 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

‘ಅಲಹಾಬಾದ್‌ ಹೈಕೋರ್ಟ್‌ನ ತೀರ್ಪಿನಲ್ಲಿ ಯಾವುದೇ ಮತಿಹೀನ ಸಂಗತಿ ಕಾಣಿಸುತ್ತಿಲ್ಲ’ ಎಂದು ಮುಖ್ಯನ್ಯಾಯಮೂರ್ತಿ ಬಿ.ಆರ್‌. ಗವಾಯಿ ಹಾಗೂ ನ್ಯಾಯಮೂರ್ತಿಗಳಾದ ಸತೀಶ್‌ ಚಂದ್ರ ಶರ್ಮಾ, ಕೆ. ವಿನೋದ್‌ ಚಂದ್ರನ್‌ ಅವರಿದ್ದ ಪೀಠ ಹೇಳಿದೆ.

ಸಾಕ್ಷ್ಯ ಕಾಯ್ದೆಯ ಸೆಕ್ಷನ್‌ 27ರ ಪ್ರಕಾರ ಸಿಬಿಐನ ತನಿಖೆಯಲ್ಲೇ ಗಂಭೀರ ಲೋಪ ಕಂಡುಬಂದಿದೆ ಎಂದು ಹೇಳಿದೆ. 

ADVERTISEMENT

ನೊಯ್ಡಾದ ನಿಥಾರಿ ಪ್ರದೇಶದಲ್ಲಿ ಅನೇಕ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಮೋನಿಂದರ್‌ ಸಿಂಗ್‌ ಪಂಧೇರ್‌ ಮತ್ತು ಸುರೇಂದ್ರ ಕೋಲಿ, ಹೆಣ್ಣುಮಕ್ಕಳನ್ನು ಮನೆಗೆ ಕರೆತಂದು ಅತ್ಯಾಚಾರ ಎಸಗಿದ ಬಳಿಕ ಕೊಲೆ ಮಾಡಿ ಮೃತದೇಹಗಳನ್ನು ಚರಂಡಿಗೆ ಎಸೆದಿದ್ದಾರೆ ಎಂದು ಪ್ರಾಸಿಕ್ಯೂಷನ್‌ ಆರೋಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.