ನವದೆಹಲಿ: ನೀತಿ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ನೀತಿ ಆಯೋಗದ ನಿರ್ದೇಶಕ ಮಟ್ಟದ ಅಧಿಕಾರಿಯಲ್ಲಿ ಮಂಗಳವಾರ ಕೊರೊನಾ ಸೋಂಕು ದೃಢಪಟ್ಟಿದೆ. ಆದ್ದರಿಂದ ಎರಡು ದಿನಗಳ ಅವಧಿಗೆ ಕಟ್ಟಡವನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಸೋಂಕು ದೃಢಪಟ್ಟಿರುವ ವರದಿ ಮಂಗಳವಾರ ಬೆಳಗ್ಗೆ 9 ಗಂಟೆಗೆ ಅವರಿಗೆ ದೊರಕಿತು. ತಕ್ಷಣ ಅವರು ಅಧಿಕಾರಿಗಳಿಗೆ ಈ ವಿಷಯ ತಿಳಿಸಿದರು. ಅವರೊಂದಿಗೆ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳಿಗೆ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗಿದೆ. ಆರೋಗ್ಯ ಸಚಿವಾಲಯಕ್ಕೆ ಈ ವಿಷಯ ತಿಳಿಸಲಾಗಿದೆ ಎಂದು ನೀತಿ ಆಯೋಗದ ಸಲಹೆಗಾರ ಅಲೋಕ್ ಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.