ADVERTISEMENT

ಗುಂಡಿನ ದಾಳಿಯಲ್ಲಿ ಯೋಧ ಹುತಾತ್ಮ: ₹50 ಲಕ್ಷ ಪರಿಹಾರ ಘೋಷಿಸಿದ ನಿತೀಶ್

ಪಿಟಿಐ
Published 13 ಮೇ 2025, 11:17 IST
Last Updated 13 ಮೇ 2025, 11:17 IST
ಬಿಎಸ್‌ಎಫ್
ಬಿಎಸ್‌ಎಫ್   

(ಸಾಂದರ್ಭಿಕ ಚಿತ್ರ)

ಪಟ್ನಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಬಿಎಸ್‌ಎಫ್ ಯೋಧ ರಾಮ್ ಬಾಬು ಸಿಂಗ್‌ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಸಂತಾಪ ಸೂಚಿಸಿದ್ದಾರೆ.

ಸಿವಾನ್ ಜಿಲ್ಲೆಯ ನಿವಾಸಿ ಸಿಂಗ್ ಅವರ ಕುಟುಂಬಕ್ಕೆ ನಿತೀಶ್ ₹50 ಲಕ್ಷ ಪರಿಹಾರ ಘೋಷಿಸಿದ್ದಾರೆ.

ADVERTISEMENT

ಸಿಂಗ್ ಅವರ ಅಂತಿಮ ವಿಧಿಗಳನ್ನು ಅವರ ಪೂರ್ವಜರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಸಿಂಗ್‌ ಅವರು ಕೆಲವು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಯೋಧನ ಸಾವಿಗೆ ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದರು.

ಮೇ 9ರಂದು ಅವರು ಗಾಯಗೊಂಡಿದ್ದರು. ಸಿಂಗ್ ಅವರ ಪಾರ್ಥೀವ ಶರೀರ ಇಂದು ರಾತ್ರಿ ಹೊತ್ತಿಗೆ ರಾಜ್ಯಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್‌ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.

ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ಮತ್ತೊಮ್ಮೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್‌. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.