ADVERTISEMENT

ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಹಾರ CM ನಿತೀಶ್

ಪಿಟಿಐ
Published 5 ಮಾರ್ಚ್ 2024, 7:47 IST
Last Updated 5 ಮಾರ್ಚ್ 2024, 7:47 IST
<div class="paragraphs"><p>ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್</p></div>

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

   

ಪಾಟ್ನಾ: ಬಿಹಾರ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಬಿಹಾರ ವಿಧಾನ ಪರಿಷತ್‌ಗೆ ಸತತ ನಾಲ್ಕನೇ ಅವಧಿಗೆ ಅವರು ಸ್ಪರ್ಧಿಸುತ್ತಿದ್ದಾರೆ.

ADVERTISEMENT

ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಮತ್ತು ರಾಜೀವ್ ರಂಜನ್ ಸಿಂಗ್ ಸೇರಿದಂತೆ ಆಡಳಿತಾರೂಢ ಎನ್‌ಡಿಎಯ ಹಿರಿಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಚುನಾವಣಾ ಆಯೋಗವು ಬಿಹಾರ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಘೋಷಿಸಿದೆ. ಜೆಡಿಯು ಎರಡು ಸ್ಥಾನಗಳನ್ನು ಗೆಲ್ಲಲಿದೆ. 2005ರಿಂದ ನಿತೀಶ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದುಕೊಂಡೇ ಸಿಎಂ ಆಗಿದ್ದಾರೆ.

ಮಾರ್ಚ್ 11 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ನಾಮಪತ್ರ ಹಿಂಪಡೆಯಲು ಮಾರ್ಚ್ 14 ಕೊನೆಯ ದಿನ. ಮಾರ್ಚ್ 21ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.