ADVERTISEMENT

‘ಬಿಜೆಪಿ ಸಖ್ಯ ತೊರೆದರೆ ಬಿಹಾರ್ ಸಿಎಂ ನಿತೀಶ್‌ ಕುಮಾರ್ ರಾಷ್ಟ್ರಪತಿ ಅಭ್ಯರ್ಥಿ’

ಎನ್‌ಸಿಪಿ ವಕ್ತಾರ ನವಾಬ್‌ ಮಲಿಕ್‌ ಹೇಳಿಕೆ

ಪಿಟಿಐ
Published 22 ಫೆಬ್ರುವರಿ 2022, 15:41 IST
Last Updated 22 ಫೆಬ್ರುವರಿ 2022, 15:41 IST
ನಿತೀಶ್‌ ಕುಮಾರ್
ನಿತೀಶ್‌ ಕುಮಾರ್    

ಮುಂಬೈ: ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ಬಿಜೆಪಿಯೊಂದಿಗೆ ಹೊಂದಿರುವ ಸಖ್ಯವನ್ನು ತೊರೆದರೆ ಮಾತ್ರ ದೇಶದ ಮುಂದಿನ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಅವರನ್ನು ಪರಿಗಣಿಸಲು ತೀರ್ಮಾನಿಸಬಹುದು ಎಂದು ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ವಕ್ತಾರ ನವಾಬ್‌ ಮಲಿಕ್‌ ಮಂಗಳವಾರ ಹೇಳಿದ್ದಾರೆ.

ಬಿಜೆಪಿಯು ಈಗ ನಡೆಯುತ್ತಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್‌, ಗೋವಾ ಮತ್ತು ಮಣಿಪುರ ಚುನಾವಣೆಗಳಲ್ಲಿ ಸೋಲು ಅನುಭವಿಸಲಿದೆ ಎಂದು ನವಾಬ್ ಮಲಿಕ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿಯ 403 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಯು 150ಕ್ಕಿಂತ ಕಡಿಮೆ ಸ್ಥಾನ ಗಳಿಸಲಿದೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.