ADVERTISEMENT

ಕಾಲಮಿತಿಯಲ್ಲಿ ಕೇಂದ್ರದ ಯೋಜನೆಗಳ ಅನುಷ್ಠಾನ: ನಿತೀಶ್ ಕುಮಾರ್ ಭರವಸೆ

ಪಿಟಿಐ
Published 15 ಸೆಪ್ಟೆಂಬರ್ 2020, 14:47 IST
Last Updated 15 ಸೆಪ್ಟೆಂಬರ್ 2020, 14:47 IST
ನಿತೀಶ್ ಕುಮಾರ್
ನಿತೀಶ್ ಕುಮಾರ್   

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚಾಲನೆ ನೀಡಿರುವ ₹ 541 ಕೋಟಿ ಅಂದಾಜು ವೆಚ್ಚದ ಏಳು ವಿವಿಧ ನಗರಾಭಿವೃದ್ಧಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲಾಗುವುದು ಎಂದುಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಭರವಸೆ ನೀಡಿದರು.

ಯೋಜನೆಗಳಿಗೆ ಚಾಲನೆ ನೀಡಿದ್ದಕ್ಕಾಗಿ ಪ್ರಧಾನಿಯವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ಇದರ ಜೊತೆಗೇ ‘ಅಮೃತ್’ ಯೋಜನೆಯಡಿ ಚಾಲ್ತಿಯಲ್ಲಿರುವ ಯೋಜನೆಗಳು ಒಳಗೊಂಡಂತೆ ಕೇಂದ್ರದ ಇತರೆ ಅಭಿವೃದ್ಧಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸಲಾಗುವುದು ಎಂದೂ ಭರವಸೆ ನೀಡಿದ್ದಾರೆ.

ಗಂಗಾ ನದಿಗೆ ಕಲುಷಿತ ನೀರು ಸೇರುವುದನ್ನು ತಪ್ಪಿಸಲು ಕ್ರಮವಾಗಿ ಬೆಹುರ್ ಮತ್ತು ಕರ್ಮಲಿಚಾಕ್‌ನಲ್ಲಿ ಎರಡು ಒಳಚರಂಡಿ ನೀರು ಶುದ್ಧೀಕರಣ ಘಟಕ, ಚಾಪ್ರಾ, ಸಿವನ್‌ ನಗರಗಳಿಗೆ ನೀರು ಸರಬರಾಜು ಯೋಜನೆಗಳು ಸೇರಿ ವಿವಿಧ ಯೋಜನೆಗಳಿಗೆ ಪ್ರಧಾನಿ ಮಂಗಳವಾರ ಚಾಲನೆ ನೀಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.