
ನಿತೀಶ್ ಕುಮಾರ್
–ಪಿಟಿಐ ಚಿತ್ರ
ಪಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮ ನವೆಂಬರ್ 20ರಂದು ನಡೆಯುವ ಸಾಧ್ಯತೆಯಿದೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಸೇರಿದಂತೆ ಎನ್‌ಡಿಎದ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನವೆಂಬರ್ 19ರಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೂತನ ಶಾಸಕರು ಮಂಗಳವಾರ ಸಭೆ ಸೇರಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಬಿಹಾರ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರು ತಿಳಿಸಿದ್ದಾರೆ.
ಬಿಹಾರದ ಎನ್‌ಡಿಎ ಸರ್ಕಾರದ ಈ ಅವಧಿಯ ಕೊನೆಯ ಸಚಿವ ಸಂಪುಟ ಸಭೆಯು ಸೋಮವಾರ ನಡೆಯಿತು.
‘ನವೆಂಬರ್ 19ರಂದು ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡುವ ನಿರ್ಣಯವನ್ನು ಸಚಿವ ಸಂಪುಟ ಅಂಗೀಕರಿಸಿದೆ. ಸಭೆಯ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಚಿವ ಸಂಪುಟದ ನಿರ್ಧಾರವನ್ನು ತಿಳಿಸಿದರು’ ಎಂದು ಬಿಹಾರ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಚೌಧರಿ ಅವರು ತಿಳಿಸಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನನ್ನಾಗಿ ನಿತೀಶ್ ಕುಮಾರ್ ಅವರನ್ನು ನವೆಂಬರ್ 19ರಂದು ಆಯ್ಕೆ ಮಾಡಲಾಗುವುದು ಎಂದು ಜೆಡಿಯು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.