ADVERTISEMENT

ವಾರಾಣಸಿ ಕ್ಷೇತ್ರ: ನಿತೀಶ್‌, ಪ್ರಿಯಾಂಕಾ ಹೆಸರು ಮುಂಚೂಣಿಯಲ್ಲಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2023, 16:12 IST
Last Updated 20 ಡಿಸೆಂಬರ್ 2023, 16:12 IST
<div class="paragraphs"><p>ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ</p></div>

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ

   

ನವದೆಹಲಿ: ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ಇಂಡಿಯಾ’ ಮೈತ್ರಿಕೂಟದಿಂದ ಸ್ಪರ್ಧಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರು ಪ್ರಸ್ತಾಪವಾಗಿವೆ.

ಮೋದಿ ವಿರುದ್ಧ ಕಣಕ್ಕಿಳಿಸಬಹುದಾದ ರಾಜಕೀಯ ಸೂಪರ್‌ಸ್ಟಾರ್‌ಗಳ ಪಟ್ಟಿ ಬಗ್ಗೆ ಪರಿಶೀಲಿಸಲಾಗುತ್ತಿದೆ  ಎಂದು ಎನ್‌ಡಿಟಿವಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಸೀಟುಹಂಚಿಕೆ ಕುರಿತು ಮೈತ್ರಿಕೂಟದ ಸದಸ್ಯರು ದೆಹಲಿಯಲ್ಲಿ ಭೇಟಿಯಾಗಿ ಚರ್ಚಿಸಿದ ಮರುದಿನ ಬುಧವಾರ ಈ ಬೆಳವಣಿಗೆ ನಡೆದಿದೆ.

ADVERTISEMENT

ಈವರೆಗೆ ನಿತೀಶ್‌ ಮತ್ತು ಪ್ರಿಯಾಂಕಾ ಗಾಂಧಿ ಅವರ ಹೆಸರು ಕೇಳಿಬಂದಿದೆ ಎಂದು ವರದಿಯಾಗಿದೆ. 1991ರಿಂದ (2004 ಹೊರತುಪಡಿಸಿ) ವಾರಾಣಸಿ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯನ್ನು ಗೆಲ್ಲಿಸಿ ಮೋದಿ ಅವರನ್ನು 2014 ಮತ್ತ 2019ರಲ್ಲಿ ಲೋಕಸಭೆಗೆ ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.