ADVERTISEMENT

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ: ತೇಜಸ್ವಿ ಡಿಸಿಎಂ

ಉಪ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್‌

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 10:27 IST
Last Updated 10 ಆಗಸ್ಟ್ 2022, 10:27 IST
ನಿತೀಶ್‌ ಕುಮಾರ್‌
ನಿತೀಶ್‌ ಕುಮಾರ್‌   

ಪಟ್ನಾ: ಜೆಡಿ(ಯು) ನಾಯಕ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರಿಗೆರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಉಪ ಮುಖ್ಯಮಂತ್ರಿಯಾಗಿಪ್ರಮಾಣವಚನ ಸ್ವೀಕರಿಸಿದರು.

ಎರಡನೇ ಬಾರಿಗೆ ಆರ್‌ಜೆಡಿ, ಕಾಂಗ್ರೆಸ್ ಪಕ್ಷಗಳ ಮಹಾಘಟಬಂಧನದಲ್ಲಿಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾದರು.

ADVERTISEMENT

ಪ್ರಮಾಣವಚನ ಸಮಾರಂಭದಲ್ಲಿತೇಜಸ್ವಿ ಯಾದವ್ಪತ್ನಿ ರಾಜಶ್ರೀ, ಮಾಜಿ ಸಿಎಂ ರಾಬ್ರಿ ದೇವಿ,ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಾಲ್ಗೊಂಡಿದ್ದರು.

ನಿನ್ನೆಬಿಜೆಪಿ ಜೊತೆಮೈತ್ರಿ ಕಡಿದುಕೊಂಡುನಿತೀಶ್ ಕುಮಾರ್ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬುಧವಾರಮಹಾಘಟಬಂಧನ್‌ ಸರ್ಕಾರದ ಮುಖ್ಯಮಂತ್ರಿಯಾದರು. ಅವರು 8ನೇ ಬಾರಿಗೆ ಸಿಎಂ ಆಗಿರುವುದು ವಿಶೇಷ.

ಇವನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.