ADVERTISEMENT

ಬಿಹಾರ: ನಿತೀಶ್‌ ಕುಮಾರ್‌ ಮತ್ತೆ ಮುಖ್ಯಮಂತ್ರಿ

ಎನ್‌ಡಿಎ ನಾಯಕನಾಗಿ ಆಯ್ಕೆ: ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

ಪಿಟಿಐ
Published 15 ನವೆಂಬರ್ 2020, 11:20 IST
Last Updated 15 ನವೆಂಬರ್ 2020, 11:20 IST
ಪಟ್ನಾದಲ್ಲಿ ಭಾನುವಾರ ನಡೆದ ಎನ್‌ಡಿಎ ಶಾಸಕಾಂಗ ಸಭೆಯಲ್ಲಿ  ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಜೆಡಿಯು ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಭಾಗವಹಿಸಿದ್ದರು  ಪಿಟಿಐ ಚಿತ್ರ
ಪಟ್ನಾದಲ್ಲಿ ಭಾನುವಾರ ನಡೆದ ಎನ್‌ಡಿಎ ಶಾಸಕಾಂಗ ಸಭೆಯಲ್ಲಿ  ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಜೆಡಿಯು ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಭಾಗವಹಿಸಿದ್ದರು  ಪಿಟಿಐ ಚಿತ್ರ   

ಪಟ್ನಾ: ಬಿಹಾರದಲ್ಲಿ ಎನ್‌ಡಿಎ ನಾಯಕರಾಗಿ ನಿತೀಶ್‌ ಕುಮಾರ್‌ ಅವರನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ ಮಾಡಲಾಗಿದೆ. ಇದರಿಂದಾಗಿ, ಸತತ ನಾಲ್ಕನೇ ಬಾರಿ ನಿತೀಶ್ ಕುಮಾರ್‌ ಅವರು ಬಿಹಾರ ಮುಖ್ಯಮಂತ್ರಿಯಾಗಲಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಸುಶೀಲ್‌ ಕುಮಾರ್‌ ಮೋದಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಮತ್ತೊಮ್ಮೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಕಟಿಹಾರ್‌ ಶಾಸಕ ತಾರ್ ಕಿಶೊರ್ ಪ್ರಸಾದ್‌ ಅವರನ್ನು ವಿಧಾನಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ADVERTISEMENT

ನಿತೀಶ್‌ ಕುಮಾರ್‌ ಅವರು ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚಿಸುವ ಹಕ್ಕು ಪ್ರತಿಪಾದಿಸಲಿದ್ದಾರೆ. ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.