ADVERTISEMENT

ಎನ್‌.ಜೆ.ಯಶಸ್ವಿ ಸ್ಮರಣಾರ್ಥ ಉಪನ್ಯಾಸ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 19:15 IST
Last Updated 25 ನವೆಂಬರ್ 2022, 19:15 IST
ಸುರೇಶ್ ಪ್ರಭು
ಸುರೇಶ್ ಪ್ರಭು   

ಹೈದರಾಬಾದ್‌: ‘ರಾಜಕಾರಣಿಗಳು ಅಥವಾ ಉದ್ಯಮಿಗಳು ಅಥವಾ ಅಧಿಕಾರಿಗಳು ಮಾತ್ರವೇ ನಾಯಕರಲ್ಲ. ನಾಯಕರಾದವರು ಸುಸ್ಥಿರ ಸಮಾಜದ ಅಭಿವೃದ್ಧಿಗೆ ಮತ್ತು ವ್ಯಕ್ತಿಗತವಾದ ಪ್ರಗತಿಗೆ ದುಡಿಯುತ್ತಾರೆ. ಗುಣಮಟ್ಟದ ಶಿಕ್ಷಣದ ಮೂಲಕ ಆಧುನಿಕ ಭಾರತವನ್ನು ಕಟ್ಟುವಲ್ಲಿ ಯಶಸ್ವಿ ಸಂಸ್ಥೆಯು ಮುಂದಾಳುವಾಗಿದೆ’ ಎಂದು ಕೇಂದ್ರದ ಮಾಜಿ ಸಚಿವ ಸುರೇಶ್
ಪ್ರಭು ಹೇಳಿದ್ದಾರೆ.

ಐಸಿಎಫ್‌ಎಐ ಶೈಕ್ಷಣಿಕ ಸಂಸ್ಥೆಗಳ ಸಂಸ್ಥಾಪಕರಾದ ಎನ್‌.ಜೆ.ಯಶಸ್ವಿ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳೂ ಭಾಗಿಯಾಗುವಲ್ಲಿ ಯಶಸ್ವಿ ಅವರ ಕೊಡುಗೆ ಮಹತ್ವದ್ದು. ಅವರು ಆ ಕಾಲದ ಶಿಕ್ಷಣ ವ್ಯವಸ್ಥೆಗೆ ಸವಾಲೆಸೆದು, ಹೊಸ ಪಠ್ಯಕ್ರಮವನ್ನು ಜಾರಿಗೆ ತಂದಿದ್ದರು’ ಎಂದು ಸುರೇಶ್ ಪ್ರಭು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.