ADVERTISEMENT

ವೈದ್ಯಕೀಯ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಉಳಿಯುವುದು ಕಡ್ಡಾಯವಲ್ಲ: ಎನ್‌ಎಂಸಿ

ಪಿಟಿಐ
Published 10 ಫೆಬ್ರುವರಿ 2024, 10:31 IST
Last Updated 10 ಫೆಬ್ರುವರಿ 2024, 10:31 IST
   

ನವದೆಹಲಿ: ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ತಮ್ಮ ಹಾಸ್ಟೆಲ್‌ಗಳಲ್ಲಿ ಉಳಿದುಕೊಳ್ಳುವಂತೆ ವೈದ್ಯಕೀಯ ಕಾಲೇಜುಗಳು ಮತ್ತು ಸಂಸ್ಥೆಗಳು ಒತ್ತಾಯಿಸಬಾರದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಎಚ್ಚರಿಕೆ ನೀಡಿದೆ.

ವೈದ್ಯಕೀಯ ಕಾಲೇಜುಗಳು ಆಯೋಗದ ನಿರ್ದೇಶನಗಳನ್ನು ಪಾಲಿಸದಿದ್ದರೆ, ದಂಡ, ಸೀಟು ಕಡಿತ ಮತ್ತು ದಾಖಲಾತಿ ಸ್ಥಗಿತದಂತಹ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದೂ ಹೇಳಿದೆ.

ಆಯೋಗವು ಫೆಬ್ರುವರಿ 8ರಂದು, 'ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ನಿಬಂಧನೆಗಳು–2023' ಅನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ. ಅದರಲ್ಲಿ, 'ಪ್ರತಿಯೊಂದು ಕಾಲೇಜು ವಿದ್ಯಾರ್ಥಿಗಳು ಉಳಿದುಕೊಳ್ಳುವುದಕ್ಕೆ ಸೂಕ್ತ ವಸತಿ ಸೌಲಭ್ಯ ಕಲ್ಪಿಸುವುದು ಕಡ್ಡಾಯ. ಆದರೆ, ಅಲ್ಲಿಯೇ ಉಳಿದುಕೊಳ್ಳುವುದು ವಿದ್ಯಾರ್ಥಿಗಳಿಗೆ ಕಡ್ಡಾಯವಲ್ಲ' ಎಂದು ಉಲ್ಲೇಖಿಸಿದೆ.

ADVERTISEMENT

ಹಾಸ್ಟೆಲ್‌ಗಳಲ್ಲಿ ಉಳಿದುಕೊಳ್ಳುವಂತೆ ವಿದ್ಯಾ ಸಂಸ್ಥೆಗಳು ತಮ್ಮನ್ನು ಒತ್ತಾಯಿಸುತ್ತಿವೆ. ಹಾಸ್ಟೆಲ್‌ ವಾಸ್ತವ್ಯಕ್ಕೆ ಭಾರಿ ಮೊತ್ತವನ್ನು ವಸೂಲಿ ಮಾಡುತ್ತಿವೆ ಎಂಬ ಸಾಕಷ್ಟು ದೂರುಗಳನ್ನು ವಿದ್ಯಾರ್ಥಿಗಳಿಂದ ಸ್ವೀಕರಿಸಿದ್ದೇವೆ. ಹಾಗಾಗಿ, 'ಬಿಡುಗಡೆ ಮಾಡಲಾಗಿರುವ ನಿಯಮಾವಳಿಯನ್ನು ಎಲ್ಲ ವೈದ್ಯಕೀಯ ಕಾಲೇಜುಗಳು ಮತ್ತು ಸಂಸ್ಥೆಗಳು ಪರಿಗಣಿಸುವಂತೆ ಸೂಚಿಸಲಾಗಿದೆ. ಇಲ್ಲವಾದರೆ, ಭಾರಿ ದಂಡ, ಕಾಲೇಜುಗಳಲ್ಲಿ ಸೀಟು ಕಡಿತ ಹಾಗೂ ದಾಖಲಾತಿ ಸ್ಥಗಿತದಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದು ಆಯೋಗವು ಸ್ಪಷ್ಟವಾಗಿದೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.