ADVERTISEMENT

ಎಐಎಂಐಎಂ ಜತೆ ಮೈತ್ರಿ ಇಲ್ಲ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸ್ಪಷ್ಟನೆ

ಪಿಟಿಐ
Published 27 ಜೂನ್ 2021, 7:40 IST
Last Updated 27 ಜೂನ್ 2021, 7:40 IST
ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ
ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ    

ಲಖನೌ:‘ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಎಐಎಂಐಎಂ ಜತೆ ಯಾವುದೇ ಮೈತ್ರಿ ಮಾಡಿಕೊಂಡಿಲ್ಲ’ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ಸ್ಪಷ್ಟನೆ ನೀಡಿದರು.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು,‘ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಬಿಎಸ್‌ಪಿಯು ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ನ್ಯೂಸ್‌ ಚಾನೆಲ್‌ವೊಂದು ವರದಿ ಮಾಡಿದೆ. ಆದರೆ ಈ ಸುದ್ದಿ ಸುಳ್ಳು. ಈ ವರದಿಯಲ್ಲಿ ಸ್ವಲ್ಪವೂ ಸತ್ಯಾಂಶವಿಲ್ಲ. ವರದಿ ಮೂಲಕ ಜನರ ದಾರಿ ತಪ್ಪಿಸಲಾಗುತ್ತಿದೆ’ ಎಂದು ಹೇಳಿದರು.

‘‌ಪಂಜಾಬ್‌ ಅನ್ನು ಹೊರತುಪಡಿಸಿ ಉತ್ತರ ಪ್ರದೇಶ, ಉತ್ತರಾಖಂಡದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿಯೇ ಸ್ಪರ್ಧಿಸಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ADVERTISEMENT

‘ಈ ರೀತಿ ತಪ್ಪು ಸುದ್ದಿಗಳ ಪ್ರಸಾರವನ್ನು ತಡೆಯಲು ಬಿಎಸ್‌ಪಿಯ ‍ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಸತೀಶ್‌ ಚಂದ್ರ ಮಿಶ್ರಾ ಅವರನ್ನು ಪಕ್ಷದ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ನೇಮಿಸಲಾಗಿದೆ. ಮಾಧ್ಯಮಗಳು ಬಿಎಸ್‌‍ಪಿಗೆ ಸಂಬಂಧಿತ ಯಾವುದೇ ವಿಷಯಗಳನ್ನು ಪ್ರಸಾರ ಮಾಡುವ ಮೊದಲು ಮಿಶ್ರಾ ಅವರನ್ನು ಸಂಪರ್ಕಿಸಬೇಕು’ ಎಂದು ಅವರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.