
ಪ್ರಜಾವಾಣಿ ವಾರ್ತೆ
ಮುಂಬೈ: ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ ಮಹಾರಾಷ್ಟ್ರದ ಆಡಳಿತ ಭಾಷೆಯಾದ ಮರಾಠಿಯ ಜೊತೆ ಬೇರೆ ಭಾಷೆಗಳಲ್ಲಿಯೂ ನಾಮಫಲಕ ಅಳವಡಿಸುವುದಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಹೇಳಿದೆ.
ಪಾತೂರ್ ಮುನಿಸಿಪಲ್ ಕೌನ್ಸಿಲ್‌ನಲ್ಲಿ ಮರಾಠಿ ಮತ್ತು ಉರ್ದು ಭಾಷೆಗಳಲ್ಲಿ ನಾಮಫಲಕ ಅಳವಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅವಿನಾಶ್ ಘರೋಟೆ ಮತ್ತು ಎಂ.ಎಸ್. ಜಾವಲಕರ್ ಅವರು ಇದ್ದ ವಿಭಾಗೀಯ ಪೀಠವು ಈ ಮಾತು ಹೇಳಿದೆ.
ಉರ್ದುವಿನಲ್ಲಿ ನಾಮಫಲಕ ಅಳವಡಿಸಿದ್ದಕ್ಕಾಗಿ ತಕ್ಷಣ ಕ್ರಮ ಜರುಗಿಸುವಂತೆ ಅಕೋಲಾ ಜಿಲ್ಲಾ ಮರಾಠಿ ಭಾಷಾ ಸಮಿತಿಯ ಅಧ್ಯಕ್ಷರಿಗೆ ಸೂಚಿಸಬೇಕು ಎಂದು ವರ್ಷಾ ಬಾಗಡೆ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಕೋರಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.