ADVERTISEMENT

ದಕ್ಷಿಣ ಆಫ್ರಿಕಾದ ಅಪಾಯಕಾರಿ ಕೋವಿಡ್ ರೂಪಾಂತರ ಭಾರತದಲ್ಲಿ ಪತ್ತೆಯಾಗಿಲ್ಲ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ನವೆಂಬರ್ 2021, 8:31 IST
Last Updated 26 ನವೆಂಬರ್ 2021, 8:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಪತ್ತೆಮಾಡಿರುವ ಕೋವಿಡ್–19 ಹೊಸ ರೂಪಾಂತರ ‘ಬಿ.1.1.529’ ದೇಶದಲ್ಲಿ ಈವರೆಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಹೊಸ ರೂಪಾಂತರ ಭಾರತದಲ್ಲಿ ಪತ್ತೆಯಾಗಿಲ್ಲ ಎಂದು ಅಧಿಕೃತ ಮೂಲಗಳ ಹೇಳಿಕೆ ಉಲ್ಲೇಖಿಸಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಹೊಸದಾಗಿ ಪತ್ತೆಯಾಗಿರುವ ರೂಪಾಂತರವು ಅಸಾಮಾನ್ಯವಾಗಿದ್ದು, ದೇಹದ ಪ್ರತಿಕಾಯಗಳಿಂದ ತಪ್ಪಿಸಿಕೊಂಡು, ಹೆಚ್ಚಾಗಿ ವ್ಯಾಪಿಸುವ ಸಾಮರ್ಥ್ಯ ಹೊಂದಿದೆ ಎಂದು ಆಫ್ರಿಕಾ ವಿಜ್ಞಾನಿಗಳು ತಿಳಿಸಿದ್ದರು.

ಆಫ್ರಿಕಾ ವಿಜ್ಞಾನಿಗಳು ಮಾಹಿತಿ ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಹೊಸದಾಗಿ ಸಲಹೆ ಸೂಚನೆಗಳನ್ನು ನೀಡಿದ್ದು, ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೋಟ್ಸ್‌ವಾನಾಗಳಿಂದ ಬರುವ ಪ್ರಯಾಣಿಕರ ಪರೀಕ್ಷೆ ಹಾಗೂ ಸ್ಕ್ರೀನಿಂಗ್ ತೀವ್ರಗೊಳಿಸುವಂತೆ ಕೇಂದ್ರ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.