ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಕೈಗೊಂಡಿರುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ 2019ರ ಆಗಸ್ಟ್ 5ರಂದು ಕೈಗೊಂಡಿದ್ದ ನಿರ್ಧಾರವನ್ನು ಮರುಪರಿಶೀಲಿಸಿದರೆ ಭಾರತದ ಜತೆ ಮಾತುಕತೆ ನಡೆಸಲು ಸೌಹಾರ್ದಯುತ ವಾತಾವರಣ ಸೃಷ್ಟಿಯಾಗುತ್ತದೆ. ಹೀಗಾಗಿ, ಭಾರತ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಪಾಕಿಸ್ತಾನ ನೀಡಿರುವ ಹೇಳಿಕೆಗೆ ಭಾರತ ಈ ಸ್ಪಷ್ಟನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.