ADVERTISEMENT

ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ‌ ಆರೋಗ್ಯ ಸ್ಥಿರ

ಪಿಟಿಐ
Published 18 ಆಗಸ್ಟ್ 2020, 7:08 IST
Last Updated 18 ಆಗಸ್ಟ್ 2020, 7:08 IST
ಪ್ರಣವ್‌ ಮುಖರ್ಜಿ
ಪ್ರಣವ್‌ ಮುಖರ್ಜಿ   

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಮುಂದುವರಿಸಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

84 ವರ್ಷದ ಮುಖರ್ಜಿ ಅವರು ಈ ತಿಂಗಳ 10ರಂದು ಇಲ್ಲಿನ ಆರ್ಮಿ ರಿಸರ್ಚ್‌ ಆ್ಯಂಡ್‌ ರೆಫೆರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT