ADVERTISEMENT

ತೃತೀಯ ಭಾಷೆಯಾಗಿ ಹಿಂದಿ ‘ಕಡ್ಡಾಯ’ವಲ್ಲ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್‌

ಪಿಟಿಐ
Published 18 ಜೂನ್ 2025, 12:36 IST
Last Updated 18 ಜೂನ್ 2025, 12:36 IST
<div class="paragraphs"><p>ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌</p></div>

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌

   

ಪಿಟಿಐ ಚಿತ್ರ

ಪುಣೆ: ‘ಮಹಾರಾಷ್ಟ್ರದಲ್ಲಿ ತೃತೀಯ ಭಾಷೆಯಾಗಿ ಹಿಂದಿಯನ್ನು ಕಡ್ಡಾಯವಾಗಿ ಕಲಿಯಬೇಕೆಂಬ ನಿಯಮವನ್ನು ರದ್ದುಪಡಿಸಲಾಗಿದೆ. ಭಾರತದ ಯಾವುದೇ ಭಾಷೆಯನ್ನು ಮೂರನೇ ಭಾಷೆಯಾಗಿ ಕಲಿಯಬಹುದು’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಬುಧವಾರ ಹೇಳಿದರು.

ADVERTISEMENT

ದೇಹು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂಗ್ಲಿಷ್‌ನ ವ್ಯಾಪಕ ಪ್ರಚಾರದಿಂದಾಗಿ ಭಾರತೀಯ ಭಾಷೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಹೀಗಾಗಿ ಭಾಷೆಗಳ ಕುರಿತ ವಿವಾದ ಅನಗತ್ಯ’ ಎಂದು ತಿಳಿಸಿದರು.

‘ಈ ಹಿಂದೆ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದ್ದೆವು. ಈ ಆದೇಶವನ್ನು ಹಿಂಪಡೆದಿದ್ದು, ಮರಾಠಿ ಕಡ್ಡಾಯ, ಹಿಂದಿ ಐಚ್ಛಿಕವಾಗಿದೆ. ಯಾವುದೇ ಶಾಲೆಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳು ಹಿಂದಿ ಹೊರತುಪಡಿಸಿ ಭಾರತೀಯ ಭಾಷೆಗಳನ್ನು ಕಲಿಯಲು ಬಯಸಿದರೆ ಅದಕ್ಕೆ ಅವಕಾಶ ನೀಡಲಾಗುತ್ತದೆ. ಒಬ್ಬ ಶಿಕ್ಷಕರನ್ನೂ ನೇಮಿಸಲಾಗುವುದು. ಅಗತ್ಯ ಬಿದ್ದರೆ ಆನ್‌ಲೈನ್‌ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗುವುದು’ ಎಂದು ಹೇಳಿದರು.

ಮರಾಠಿ ಹಾಗೂ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯಾಗಿ ಹಿಂದಿಯನ್ನು ಸಾಮಾನ್ಯವಾಗಿ ಕಲಿಸಲಾಗುವುದು ಎಂದು ರಾಜ್ಯ ಸರ್ಕಾರವು ಮಂಗಳವಾರ ಆದೇಶ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.