ADVERTISEMENT

ಹಿಜಾಬ್–ಕೇಸರಿ ಶಾಲು ವಿವಾದ: ಕೇಂದ್ರದ ಮಧ್ಯಪ್ರವೇಶಕ್ಕೆ ಸಿಪಿಎಂ ಸಂಸದ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2022, 1:37 IST
Last Updated 10 ಫೆಬ್ರುವರಿ 2022, 1:37 IST
   

ನವದೆಹಲಿ: ಕರ್ನಾಟಕದಲ್ಲಿ ಉದ್ಭವಿಸಿರುವ ಹಿಜಾಬ್–ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ರಾಜ್ಯಸಭೆಯಲ್ಲಿ ಸಿಪಿಎಂನ ಸಭಾನಾಯಕ ಎಳಮರಮ್ ಕರೀಂ ಬುಧವಾರ ಒತ್ತಾಯಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದಿರುವ ಅವರು, ‘ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವುದಕ್ಕೆ ಸಂಬಂಧಿಸಿ ದಶಕಗಳಿಂದ ವಿವಾದವೇ ಇರಲಿಲ್ಲ. ಈಗ ದುರುದ್ದೇಶಪೂರಕವಾಗಿ ವಿವಾದವನ್ನು ಸೃಷ್ಟಿಸಲಾಗಿದೆ’ ಎಂದಿದ್ದಾರೆ.

‘ಕೋಮು ಧ್ರುವೀಕರಣ ಉದ್ದೇಶದಿಂದ ಈ ವಿವಾದವನ್ನು ಹುಟ್ಟು ಹಾಕಲಾಗಿದೆ. ಮುಸ್ಲಿಂ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು’ ಎಂದೂ ಅವರು ಪತ್ರದಲ್ಲಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.