ನವದೆಹಲಿ: ಮಕ್ಕಳಿಗೆ ಲಸಿಕೆ ಮತ್ತು ಕೋವಿಡ್ ರೋಗಿಗಳಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸೋಮವಾರದ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ಬೂಸ್ಟರ್ ಡೋಸ್ ಕುರಿತು ಸಮರ್ಥನೆಯಾಗಿ ಯಾವುದೇ ವೈಜ್ಞಾನಿಕ ಅಧ್ಯಯನ ಇಲ್ಲದಿರುವುದು ಈ ನಿರ್ಧಾರಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ಭಾರತೀಯ ವೈದ್ಯಕೀಯ ಸಂಘವು ಆರೋಗ್ಯ ಕಾರ್ಯಕರ್ತರಿಗೆ ಹೆಚ್ಡುವರಿಯಾಗಿ ಒಂದು ಡೋಸ್ ಲಸಿಕೆ ನೀಡಬೇಕು ಎಂದು ಸರ್ಕಾರರವನ್ನು ಆಗ್ರಹಪಡಿಸಿದೆ.
ಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಮೂಲಗಳ
ಪ್ರಕಾರ, ಬೂಸ್ಟರ್ ಡೋಸ್ ಸಮರ್ಥನೆಯಾಗಿ ವೈಜ್ಞಾನಿಕ ಅಧ್ಯಯನ ಇಲ್ಲದಿರುವುದು ಹಾಗೂ ಈ ಸಂಬಂಧ ಸಹಮತ ಮೂಡದ ಕಾರಣ ಶಿಫಾರಸು ಮಾಡಿಲ್ಲ.
ವೈಜ್ಞಾನಿಕ ಶಿಫಾರಸು ಆಧರಿಸಿ ಮಕ್ಕಳಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದು ಕೊಳ್ಳಲಿದೆ ಎಂದು ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಕಳೆದ ವಾರ ಲೋಕಸಭೆಯಲ್ಲಿ
ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.