ADVERTISEMENT

ದೇಶದಲ್ಲಿ ವಾಕ್ ಸ್ವಾತಂತ್ರ್ಯವೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಪಿಟಿಐ
Published 11 ಫೆಬ್ರುವರಿ 2023, 10:32 IST
Last Updated 11 ಫೆಬ್ರುವರಿ 2023, 10:32 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ರಾಂಚಿ: ದೇಶದಲ್ಲಿ ವಾಕ್ ಸ್ವಾತಂತ್ರ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಆರೋಪಿಸಿದ್ದಾರೆ.

ಜಾರ್ಖಂಡ್‌ ರಾಜ್ಯದ ಸಾಹೇಬ್‌ಗಂಜ್‌ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷದ ‘ಹಾತ್ ಸೇ ಹಾತ್ ಜೋಡೊ‘ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಸತ್ತಿನಲ್ಲಿ ನನ್ನ ಭಾಷಣದ ಕೆಲವು ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವೇ ಇಲ್ಲವಾಗಿದೆ. ಮಾತನಾಡಲು ಧೈರ್ಯ ಮಾಡುವವರನ್ನು ಜೈಲಿಗೆ ಹಾಕಲಾಗುತ್ತದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ADVERTISEMENT

2014ರಲ್ಲಿ ಹಣದುಬ್ಬರ ತಡೆಯುವ ಭರವಸೆಯೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿತು. ಆದರೆ ಅವರು ಅಧಿಕಾರಕ್ಕೆ ಬಂದಾಗಿನಿಂದ ಅಗತ್ಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿವೆ. ದೇಶದಲ್ಲಿ ಬಡತನ ಹೆಚ್ಚುತ್ತಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ದೇಶದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿತು ಮತ್ತು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿತು ಎಂದು ಖರ್ಗೆ ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ಸಚಿವ ಆಲಂಗೀರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.