ADVERTISEMENT

ಸನಾತನ ಧರ್ಮದ ಬಗ್ಗೆ ಹೇಳಿಕೆ | ಉದಯನಿಧಿ ವಿರುದ್ಧ ಹೊಸ FIR ಬೇಡ: ಸುಪ್ರೀಂ ಕೋರ್ಟ್

ಪಿಟಿಐ
Published 6 ಮಾರ್ಚ್ 2025, 6:39 IST
Last Updated 6 ಮಾರ್ಚ್ 2025, 6:39 IST
   

ನವದೆಹಲಿ: ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ವಿರುದ್ಧ ಯಾವುದೇ ಹೊಸ ಎಫ್‌ಐಆರ್‌ಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್‌ ಗುರುವಾರ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಉದಯನಿಧಿ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಬಲವಂತದ ಕ್ರಮಗಳ ವಿರುದ್ಧ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.

2023ರ ಸೆಪ್ಟೆಂಬರ್‌ನಲ್ಲಿ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ, ‘ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಹೇಳಿದ್ದರು.

ADVERTISEMENT

ಅಲ್ಲದೇ ಸನಾತನ ಧರ್ಮವನ್ನು ಕೊರೊನಾ, ಮಲೇರಿಯಾ ಮತ್ತು ಡೆಂಗಿಗೂ ಹೋಲಿಸಿದ್ದರು.

ಈ ಹೇಳಿಕೆ ವಿರುದ್ಧ ಮಹಾರಾಷ್ಟ್ರ, ಬಿಹಾರ, ಜಮ್ಮು ಮತ್ತು ಕರ್ನಾಟಕದಲ್ಲಿ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.