
ಕಿರಣ್ ರಿಜಿಜು
ನವದೆಹಲಿ: ಪ್ರಧಾನಿ ವಿರುದ್ಧ ಅಸಂಸದೀಯ ಭಾಷೆ ಬಳಸಿದ್ದಕ್ಕಾಗಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸರ್ಕಾರ ಯಾವುದೇ ಗೊತ್ತುವಳಿ ಮಂಡಿಸುವುದಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಶುಕ್ರವಾರ ಹೇಳಿದ್ದಾರೆ.
ಬಿಜೆಪಿ ಸಂಸದರೊಬ್ಬರು ಈಗಾಗಲೇ ‘ಸ್ವತಂತ್ರ ನಿರ್ಣಯ’ದ ನೋಟಿಸ್ ಸಲ್ಲಿಸಿದ್ದಾರೆ. ಇದೇ ವಿಚಾರವಾಗಿ ಮತ್ತೊಂದು ಗೊತ್ತುವಳಿ ಮಂಡಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಲ್ಲಿಸಿರುವ ನೋಟಿಸ್ ಅನ್ನು ಹಕ್ಕುಬಾಧ್ಯತಾ ಸಮಿತಿ ಅಥವಾ ನೈತಿಕ ಸಮಿತಿಗೆ ಕಳುಹಿಸಬೇಕೇ ಇಲ್ಲವೇ ನೇರವಾಗಿ ಲೋಕಸಭೆಯಲ್ಲಿ ಮಂಡಿಸಬೇಕೇ ಎಂಬ ಬಗ್ಗೆ ಸ್ಪೀಕರ್ ಜೊತೆ ಸಮಾಲೋಚನೆ ನಡೆಸಲಾಗುವುದು’ ಎಂದರು.
ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕು ಹಾಗೂ ಅವರು ಚುನಾವಣೆಯಲ್ಲಿ ಯಾವತ್ತೂ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂಬ ಬೇಡಿಕೆ ಇರುವ ‘ಸ್ವತಂತ್ರ ನಿರ್ಣಯ’ದ ನೋಟಿಸ್ ಅನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.