ADVERTISEMENT

ಮಧ್ಯಪ್ರದೇಶ ಬಿಜೆಪಿ ಸರ್ಕಾರದಲ್ಲಿ ಅಸ್ಥಿರತೆ ಇಲ್ಲ: ತೋಮರ್

ಏಜೆನ್ಸೀಸ್
Published 9 ಜೂನ್ 2021, 8:44 IST
Last Updated 9 ಜೂನ್ 2021, 8:44 IST
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್   

ಗ್ವಾಲಿಯರ್ (ಮ.ಪ್ರದೇಶ): ಮಧ್ಯ ಪ್ರದೇಶದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಾಗಳನ್ನು ನಿರಾಕರಿಸಿರುವ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯಾವುದೇ ಅಸ್ಥಿರತೆ ಇಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ತೋಮರ್, ಮಧ್ಯ ಪ್ರದೇಶ ಸರ್ಕಾರದಲ್ಲಿ ಯಾವುದೇ ಅಸ್ಥಿರತೆ ಇಲ್ಲ. ಪಕ್ಷವು ಶಿವರಾಜ್ ಅವರನ್ನು ಆಯ್ಕೆ ಮಾಡಿದೆ. ಅವರೇ ಮುಖ್ಯಮಂತ್ರಿ. ಮಧ್ಯ ಪ್ರದೇಶದಲ್ಲಿ ಬಿಜೆಪಿ ಸರ್ಕಾರವಿದ್ದು, ಪಕ್ಷವೇ ಯಾರು ಸಿಎಂ ಆಗುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ಬಿಜೆಪಿಯ ಮುಖ್ಯಮಂತ್ರಿ ಬಗ್ಗೆ ಕಾಂಗ್ರೆಸ್ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಮತ್ತು ವಿ.ಡಿ. ಶರ್ಮಾ ಅವರ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಕೂಡಾ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಮಧ್ಯಪ್ರದೇಶ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ಬಗ್ಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಭೋಪಾಲದಲ್ಲಿ ಬೀಡು ಬಿಟ್ಟಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯವರ್ಗೀಯ ರಾಜ್ಯದ ನಾಯಕರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.