ADVERTISEMENT

ಪ್ರಜಾತಂತ್ರದಲ್ಲಿ ಯಾವ ಸಂಸ್ಥೆಯೂ ಪರಿಪೂರ್ಣವಲ್ಲ: ಸಿಜೆಐ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 18:24 IST
Last Updated 25 ನವೆಂಬರ್ 2022, 18:24 IST
ನವದೆಹಲಿಯಲ್ಲಿ ಶುಕ್ರವಾರ ನಡೆದ ‘ಸಂವಿಧಾನ ದಿನ’ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಪಾಲ್ಗೊಂಡಿದ್ದರು –ಪಿಟಿಐ ಚಿತ್ರ
ನವದೆಹಲಿಯಲ್ಲಿ ಶುಕ್ರವಾರ ನಡೆದ ‘ಸಂವಿಧಾನ ದಿನ’ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಪಾಲ್ಗೊಂಡಿದ್ದರು –ಪಿಟಿಐ ಚಿತ್ರ   

ನವದೆಹಲಿ: ‘ಸಂವಿಧಾನ ಹೊಂದಿರುವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ಸಂಸ್ಥೆಯೂ ನೂರಕ್ಕೆ ನೂರರಷ್ಟು ಪರಿಪೂರ್ಣ ಇರುವುದಿಲ್ಲ. ಹೀಗಾಗಿ, ಉನ್ನತ ಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗೆ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ಟೀಕಿಸುವುದರಲ್ಲಿ ಅರ್ಥ ಇಲ್ಲ’ ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದರು.

‘ಸಂವಿಧಾನ ದಿನ’ದ ಅಂಗವಾಗಿ ಸುಪ್ರೀಂಕೋರ್ಟ್‌ ವಕೀಲರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾವೆಲ್ಲರೂ ಸಂವಿಧಾನ ಹಾಕಿಕೊಟ್ಟಿರುವ ನಿರ್ದಿಷ್ಟ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುತ್ತೇವೆ. ಸಂವಿಧಾನದ ಆಶಯಗಳನ್ನು ಅನುಷ್ಠಾನಕ್ಕೆ ತರುವವರ ನಿಷ್ಠೆಯ ಯೋಧರಾಗಿದ್ದೇವೆ’ ಎಂದು ಹೇಳಿದರು.

ADVERTISEMENT

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮಾತನಾಡಿ, ‘ನ್ಯಾಯಾಂಗದ ಸ್ವಾತಂತ್ರ್ಯವನ್ನು ಸಂರಕ್ಷಣೆಯನ್ನು ಕೇಂದ್ರ ಸರ್ಕಾರ ಖಾತ್ರಿಪಡಿಸುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.