ADVERTISEMENT

ಉತ್ತರ ಪ್ರದೇಶ ಸರ್ಕಾರದಿಂದ ಮನವಿ: ಕನ್ವರ್‌ ಯಾತ್ರೆ ರದ್ದತಿಗೆ ಸಂಘಟಕರ ನಿರ್ಧಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜುಲೈ 2021, 7:20 IST
Last Updated 18 ಜುಲೈ 2021, 7:20 IST
ಕನ್ವರ್‌ ಯಾತ್ರಿಕರು
ಕನ್ವರ್‌ ಯಾತ್ರಿಕರು   

ಲಖನೌ: ಕನ್ವರ್‌ ಯಾತ್ರೆಯನ್ನು ರದ್ದುಗೊಳಿಸುವಂತೆ ಉತ್ತರ ಪ್ರದೇಶ ಸರ್ಕಾರ ಮಾಡಿದ ಮನವಿಗೆ ಸಂಘಟಕರು ಒಪ್ಪಿಗೆ ಸೂಚಿಸಿದ್ದಾರೆ.

ಕೋವಿಡ್‌-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಈ ಬಾರಿಯ ಕನ್ವರ್‌ ಯಾತ್ರೆಯನ್ನು ರದ್ದುಗೊಳಿಸಿದೆ.

ಕನ್ವರ್‌ ಯಾತ್ರೆಯನ್ನು ನಿಲ್ಲಿಸುವಂತೆ ಕನ್ವರ್‌ ಸಂಘಗಳಿಗೂ ಉತ್ತರ ಪ್ರದೇಶ ಸರ್ಕಾರವು ಮನವಿ ಮಾಡಿತ್ತು. ಅದರಂತೆ ಸಂಘಗಳು ಯಾತ್ರೆ ರದ್ದು ಮಾಡಲು ನಿರ್ಧರಿಸಿವೆ.

ಕನ್ವರ್‌ ಯಾತ್ರೆಗೆ ಉತ್ತರ ಪ್ರದೇಶ ಸರ್ಕಾರವು ಈ ಮೊದಲು ಅನುಮತಿ ನೀಡಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು.

ADVERTISEMENT

‘ಧಾರ್ಮಿಕ ಆಚರಣೆಗಳಿಗಿಂತಲೂ ದೇಶದ ನಾಗರಿಕರ ಬದುಕುವ ಹಕ್ಕು ಮುಖ್ಯ. ಹಾಗಾಗಿ, ಕನ್ವರ್‌ ಯಾತ್ರೆಗೆ ಅನುಮತಿ ನೀಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು,' ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿತ್ತು. ಅದರಂತೆ ಉತ್ತರ ಪ್ರದೇಶ ಸರ್ಕಾರವು ಯಾತ್ರೆ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕನ್ವರ್‌ ಸಂಘಗಳಿಗೆ ಮನವಿ ಮಾಡಿತ್ತು.

ಕನ್ವರ್‌ ಯಾತ್ರೆಯು ಜುಲೈ 25ರಿಂದ ಆಗಸ್ಟ್‌ 6ರವರೆಗೆ ನಡೆಯಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.