ADVERTISEMENT

ಕುನಾಲ್‌ ಅನ್ನು ಬಂಧಿಸುವಂತಿಲ್ಲ: ಬಾಂಬೆ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 16:04 IST
Last Updated 16 ಏಪ್ರಿಲ್ 2025, 16:04 IST
ಕುನಾಲ್‌ ಕಾಮ್ರಾ
ಕುನಾಲ್‌ ಕಾಮ್ರಾ   

ಮುಂಬೈ: ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಅನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿರುವ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಅವರ ಅರ್ಜಿ ಕುರಿತು ಆದೇಶ ಹೊರಡಿಸುವವರೆಗೂ, ಅವರನ್ನು ಬಂಧಿಸಬಾರದು ಎಂದು ಬಾಂಬೆ ಹೈಕೋರ್ಟ್‌ ಮಧ್ಯಂತರ ಪರಿಹಾರ ಒದಗಿಸಿದೆ.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯೂ ಆಗಿರುವ ಶಿವಸೇನಾ ಮುಖ್ಯಸ್ಥ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕರೆದಿರುವ ಆರೋಪದ ಮೇರೆಗೆ ಕುನಾಲ್‌ ಕಾಮ್ರಾ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಮ್ರಾ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಾರಂಗ್‌ ಕೊತ್ವಾಲ್‌ ಮತ್ತು ಎಸ್‌.ಎಂ.ಮೋದಕ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠವು, ಆದೇಶವನ್ನು ಕಾಯ್ದಿರಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.