ADVERTISEMENT

ಬಿಹಾರದಲ್ಲಿ ಎನ್‌ಆರ್‌ಸಿ ಇಲ್ಲ; ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 19:51 IST
Last Updated 25 ಫೆಬ್ರುವರಿ 2020, 19:51 IST

ಪಟ್ನಾ: ಬಿಹಾರದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೊಳಿಸದೆ ಇರಲು ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.

‘ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು (ಎನ್‌ಪಿಆರ್) 2010ರ ಮಾದರಿಯಲ್ಲಿರುವಂತೆ ಜಾರಿಗೆ ತರಲಾಗುತ್ತದೆ. ಪ್ರಸ್ತುತ ಇರುವ ಎನ್‌ಪಿಆರ್ ಮಾದರಿ ಅನುಸರಿಸುವುದಿಲ್ಲ’ ಎಂದೂ ನಿರ್ಣಯದಲ್ಲಿ ಹೇಳಲಾಗಿದೆ. ‘ಪ್ರಸ್ತುತ ಇರುವ ಎನ್‌ಪಿಆರ್‌ ಮಾದರಿ ಜನರಲ್ಲಿ ಭೀತಿ ಹುಟ್ಟಿಸಿದೆ’ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸದನದಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT