ADVERTISEMENT

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಸಿಎಎ, ಎನ್‌ಆರ್‌ಸಿ ಜಾರಿ ಇಲ್ಲ

ಕಾಂಗ್ರೆಸ್‌ನಿಂದ ‘ಏಕತೆಗಾಗಿ ಸತ್ಯಾಗ್ರಹ’

ಏಜೆನ್ಸೀಸ್
Published 23 ಡಿಸೆಂಬರ್ 2019, 21:44 IST
Last Updated 23 ಡಿಸೆಂಬರ್ 2019, 21:44 IST
   

ನವದೆಹಲಿ: ‘ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಜಾರಿ ಮಾಡುವುದಿಲ್ಲ’ ಎಂದು ಪಕ್ಷದ ನಾಯಕರು ಸೋಮವಾರ ಹೇಳಿದ್ದಾರೆ.

ರಾಜ್‌ಘಾಟ್‌ನಲ್ಲಿಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ‘ಏಕತೆಗಾಗಿ ಸತ್ಯಾಗ್ರಹ’ದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ನಿರ್ಧಾರ ಪ್ರಕಟಿಸಿದರು.ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿರುವಸಿಎಎ ಹಾಗೂ ಎನ್‌ಆರ್‌ಸಿಯನ್ನು ಜಾರಿ ಮಾಡುವುದಿಲ್ಲ ಎಂದುರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್ ಸ್ಪಷ್ಟಪಡಿಸಿದರು. ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೆಲ ಪರವಾಗಿ ಹಾಜರಿದ್ದ ಸಚಿವ ಶರಣ್ ಸಿಂಗ್ ದೇವ್ ಅವರೂ ದನಿಗೂಡಿಸಿದರು.

ಕಾಂಗ್ರೆಸ್‌ ಮುಖಂಡರಾದ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮೊದಲಾದವರು ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದರು. ಸಿಎಎ ವಿರೋಧಿಸಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಬೆಂಬಲಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.