ADVERTISEMENT

ಜೆಎನ್‌ಯು ಹಿಂಸಾಚಾರ ಪ್ರಕರಣದಡಿ ಯಾರನ್ನೂ ಬಂಧಿಸಿಲ್ಲ: ಕೇಂದ್ರ ಸರ್ಕಾರ

ಪಿಟಿಐ
Published 3 ಆಗಸ್ಟ್ 2021, 9:25 IST
Last Updated 3 ಆಗಸ್ಟ್ 2021, 9:25 IST
ನಿತ್ಯಾನಂದ ರೈ
ನಿತ್ಯಾನಂದ ರೈ   

ನವದೆಹಲಿ: ‘ಇಲ್ಲಿನ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಕಳೆದ ವರ್ಷ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಯಾರನ್ನೂ ಬಂಧಿಸಿಲ್ಲ’ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಗಳವಾರ ಲೋಕಸಭೆಗೆ ತಿಳಿಸಿದರು.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಸಂತ್ ಕುಂಜ್ (ಉತ್ತರ) ಪೊಲೀಸ್‌ ಠಾಣೆಯಲ್ಲಿ ದಾಖಲಾದ ಮೂರು ಪ್ರಕರಣಗಳ ತನಿಖೆಗಾಗಿ ಅಪರಾಧ ವಿಭಾಗವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿತ್ತು ಎಂಬುದಾಗಿ ದೆಹಲಿ ಪೊಲೀಸ್‌ ಇಲಾಖೆ ವರದಿ ಮಾಡಿದೆ’ ಎಂದು ಅವರು ಹೇಳಿದರು.

‘ಈ ತನಿಖೆಯ ಭಾಗವಾಗಿ ಸಾಕ್ಷಿಗಳನ್ನು ಪರಿಶೀಲಿಸಲಾಗಿತ್ತು. ದೃಶ್ಯಾವಳಿಗಳನ್ನು ಸಂಗ್ರಹಿಸಿ, ಪರೀಕ್ಷಿಸಲಾಗಿತ್ತು ಮತ್ತು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಯಾರೊಬ್ಬರನ್ನು ಬಂಧಿಸಲಾಗಿಲ್ಲ ಎಂಬುದನ್ನು ವರದಿ ಹೇಳಿದೆ’ ಎಂದು ಸಚಿವರು ಡಿಎಂಕೆ ಸದಸ್ಯ ದಯಾನಿಧಿ ಮಾರನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.